ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಬಾಂಗ್ಲಾದೇಶ ತಂಡದ ವಿರುದ್ಧ 8 ರನ್ಗಳ ರೋಚಕ ಜಯ ಸಾಧಿಸುವ ಮೂಲಕ ಇತಿಹಾಸದಲ್ಲೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಿದೆ. ಜೊತೆ ವಿಶ್ವಕಪ್ ಸೆಮಿಸ್ ಪ್ರವೇಶಿಸುವ ಕನಸು ಕಂಡಿದ್ದ ಬಲಿಷ್ಠ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಟೂರ್ನಿಯಿಂದಲೇ ಹೊರದಬ್ಬಿದೆ.
ಕಿಂಗ್ಸ್ಟೌನ್ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಪಂದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನ್ ತಂಡ 20 ಓವರ್ಗಳಲ್ಲಿ 5 ವಿಕೆಟ್ಗೆ ಕೇವಲ 115 ರನ್ ಗಳಿಸಿತ್ತು. ನಂತರ ಪಂದ್ಯಕ್ಕೆ ಮಳೆ ಅಡ್ಡಿಯುಂಟಾದ್ದರಿಂದ ಬಾಂಗ್ಲಾದೇಶ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ 19 ಓವರ್ಗಳಲ್ಲಿ 114 ರನ್ಗಳ ಅಲ್ಪ ಮೊತ್ತದ ಗುರಿ ಪಡೆದಿತ್ತು. ಆದ್ರೆ ಅಫ್ಘಾನ್ ಬೌಲರ್ಗಳ ದಾಳಿಗೆ ತತ್ತರಿಸಿದ ಬಾಂಗ್ಲಾ 105 ರನ್ಗಳಿಗೆ ಆಲೌಟ್ ಆಗಿ ವಿಶ್ವಕಪ್ಗೆ ವಿದಾಯ ಹೇಳಿತು.