Friday, December 8, 2023

Latest Posts

ಶಮಿಯ ಮಾರಕ ದಾಳಿಗೆ ಸ್ಪರ್ಧಾತ್ಮಕ ರನ್ ಗಳಿಸಿದ ಆಸ್ಟ್ರೇಲಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೊಹಮ್ಮದ್ ಶಮಿಯ ಮಾರಕ ದಾಳಿಗೆ ಮಂಕಾದ ಪ್ರವಾಸಿ ಆಸ್ಟ್ರೇಲಿಯಾ ತಂಡವು ಮೊದಲ ಏಕದಿನ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ 276 ರನ್ ಬಾರಿಸಿ ಸರ್ವಪತನ ಕಂಡಿದೆ.

ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಆಸ್ಟ್ರೇಲಿಯಾಆರಂಭದಲ್ಲಿಯೇ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು.

ಮೂರನೇ ವಿಕೆಟ್‌ಗೆ ಈ ಜೋಡಿ 106 ಎಸೆತಗಳನ್ನು ಎದುರಿಸಿ 94 ರನ್‌ಗಳ ಜತೆಯಾಟವಾಡಿದರು. ಚುರುಕಿನ ಆಟವಾಡಿದ ಡೇವಿಡ್ ವಾರ್ನರ್ 53 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 52 ರನ್ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.. ಸ್ಟೀವ್ ಸ್ಮಿತ್ 60 ಎಸೆತಗಳನ್ನು ಎದುರಿಸಿ 3 ಬೌಂಡರಿ ಒಂದು ಸಿಕ್ಸರ್ ಸಹಿತ 41 ರನ್ ಬಾರಿಸಿ ಪೆವಿಲಿಯನ್ ಸೇರಿದರು.

ಇನ್ನುಳಿದಂತೆ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ 31 ರನ್ ಗಳಿಸಿ ಇಲ್ಲದ ಎರಡನೇ ರನ್ ಕದಿಯಲು ಹೋಗಿ ರನೌಟ್ ಆಗಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಶ್(45) ಹಾಗೂ ಮಾರ್ಕಸ್ ಸ್ಟೋನಿಸ್(29 ಚುರುಕಾಗಿ ರನ್ ಗಳಿಸುವ ಮೂಲಕ ತಂಡದ ಮೊತ್ತ 250ರ ಗಡಿ ದಾಟುವಂತೆ ಮಾಡಿದರು.

ಏಷ್ಯಾಕಪ್ ಟೂರ್ನಿಯಲ್ಲಿ ಬಹುತೇಕ ಬೆಂಚ್ ಕಾಯಿಸಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಬಲಾಢ್ಯ ಆಸ್ಟ್ರೇಲಿಯಾ ಬ್ಯಾಟರ್‌ಗಳ ಎದುರು ಮಾರಕ ದಾಳಿ ನಡೆಸಿ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!