ಆಸ್ಟ್ರೇಲಿಯಾ- ಟೀಂ ಇಂಡಿಯಾ ಮ್ಯಾಚ್ ಆರಂಭ: ಟಾಸ್ ಗೆದ್ದ ರೋಹಿತ್, 8 ಓವರ್‌ ಪಂದ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯ ದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಉಮೇಶ್ ಯಾದವ್ ಹಾಗೂ ಭುವನೇಶ್ವರ್ ಕುಮಾರ್ ತಂಡದಿಂದ ಹೊರಗುಳಿದಿದ್ದಾರೆ. ಜಸ್ಪ್ರೀತ್ ಬುಮ್ರಾ ಹಾಗೂ ರಿಷಬ್ ಪಂತ್ ತಂಡ ಸೇರಿಕೊಂಡಿದ್ದಾರೆ. ಪಂದ್ಯ ವಿಳಂಬವಾದ ಕಾರಣ ಪಂದ್ಯವನ್ನು 8 ಓವರ್‌ಗೆ ಸಮೀತಗೊಳಿಸಲಾಗಿದೆ. ಪವರ್ ಪ್ಲೇ ಓವರ್ ಕೇವಲ 2 ಮಾತ್ರ. ಇನ್ನು ಓರ್ವ ಬೌಲರ್ ಗರಿಷ್ಠ ಎರಡು ಓವರ್ ಮಾತ್ರ ಬೌಲಿಂಗ್ ಮಾಡಲು ಅವಕಾಶವಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಹಾಲ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!