ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಟೂರ್ನಿ ಮುನ್ನ ಟೀಂ ಇಂಡಿಯಾಗೆ ಇದೀಗ ಆಸ್ಟ್ರೇಲಿಯಾ ಸವಾಲು ಎದುರಾಗಿದ್ದು, ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ತಂಡಕ್ಕೆ ಟಿಮ್ ಡೇವಿಡ್ ಪದಾರ್ಪಣೆ ಮಾಡಿದ್ದಾರೆ. ಟೀಂ ಇಂಡಿಗೆ ಯಜುವೇಂದ್ರ ಚಹಾಲ್ ಹಾಗೂ ಅಕ್ಸರ್ ಪಟೇಲ್ ಸೇರಿಕೊಂಡಿದ್ದಾರೆ. ಆದರೆ ರಿಷಬ್ ಪಂತ್ ಹೊರಗುಳಿದಿದ್ದಾರೆ. ಇತ್ತ ಜಸ್ಪ್ರೀತ್ ಬುಮ್ರಾ ಇಂದಿನ ಪಂದ್ಯ ಆಡುತ್ತಿಲ್ಲ.
ಟೀಂ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯುಜುವೇಂದ್ರ ಚಹಾಲ್
ಆಸ್ಟ್ರೇಲಿಯಾ ಪ್ಲೇಯಿಂಗ್11
ಆ್ಯರೋನ್ ಫಿಂಚ್(ನಾಯಕ), ಕ್ಯಮರೂನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂವೇಡ್, ಪ್ಯಾಟ್ ಕಮಿನ್ಸ್, ನಥನ್ ಎಲ್ಲಿಸ್, ಆ್ಯಡಮ್ ಜಂಪಾ, ಜೋಶ್ ಹೇಜಲ್‌ವುಡ್
ಈ ಬಾರಿಯ ಏಷ್ಯಾಕಪ್‌ನಲ್ಲಿ ಚಾಂಪಿಯನ್ ಆಗುವ ವಿಶ್ವಾಸದಿಂದ ಟೂರ್ನಿ ಪ್ರವೇಶಿಸಿದ್ದ ಭಾರತ, ಫೈನಲ್ ಪ್ರವೇಶಿಸಿದೆ ಹೊರಬಿದ್ದಿತ್ತು. ಇದೀಗ ಟೀಂ ಇಂಡಿಯಾ ಅತ್ಯುತ್ತಮ ಕಾಂಬಿನೇಷನ್ ನಿರ್ಧರಿಸಲು ಈ ಸರಣಿ ನೆರವಾಗಲಿದೆ.