Tuesday, November 4, 2025

IND vs AUS: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ.

ಈ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಪರ್ತ್​​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 7 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು ಸಮಬಲಗೊಳಿಸಬಹುದು. ಅಲ್ಲದೆ ಮೂರನೇ ಪಂದ್ಯದ ಮೂಲಕ ಸರಣಿ ಜಯಿಸಬಹುದು.

ನಮ್ಮ ಟೀಂನಲ್ಲಿ ಯಾರಿದ್ದಾರೆ?
ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಆಸ್ಟ್ರೇಲಿಯಾ ಟೀಂನಲ್ಲಿ ಯಾರಿದ್ದಾರೆ?
ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಫಿಲಿಪ್ , ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್,ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಾಬುಶೇನ್.

error: Content is protected !!