ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಶನಿವಾರ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ಫೈನಲ್ ಗೆ ಕೇವಲ ನಾಲ್ಕು ದಿನಗಳ ಮುನ್ನ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾದ ಬೇಸಿಗೆಯ ಕೊನೆಯಲ್ಲಿ ಟೆಸ್ಟ್ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಪಡೆಯುವುದಾಗಿ ಡೇವಿಡ್ ವಾರ್ನರ್ ಹೇಳಿದ್ದಾರೆ.

ಜನವರಿಯಲ್ಲಿ ಪಾಕಿಸ್ತಾನ ವಿರುದ್ಧದ ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದ ನಂತರ ಟೆಸ್ಟ್ ಸ್ವರೂಪಕ್ಕೆ ವಿದಾಯ ಹೇಳುವುದಾಗಿ ಡೇವಿಡ್ ವಾರ್ನರ್ ಹೇಳಿದ್ದಾರೆ. ಆದಾಗ್ಯೂ, ಕನಿಷ್ಠ 2024ರ ಟಿ20 ವಿಶ್ವಕಪ್ ವರೆಗೆ ವೈಟ್-ಬಾಲ್ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪರ ಆಡುವುದನ್ನು ಮುಂದುವರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!