ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್ ಕಾನ್ಸುಲೇಟ್ ಕಚೇರಿ: ಸಿಎಂ ಸಿದ್ದರಾಮಯ್ಯ ಹರ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದಲ್ಲಿನ ಆಸ್ಟ್ರೇಲಿಯಾದ ಕಾನ್ಸಲ್ ಜನರಲ್ ಬ್ಯಾರಿ ಓʼ ಫ್ಯಾರೆಲ್ ಇಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ವೇಳೆ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿರ್ಧರಿಸಲಾಯಿತು. ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್ ಕಾನ್ಸುಲೇಟ್ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.

https://twitter.com/CMofKarnataka/status/1664214331213619203?ref_src=twsrc%5Etfw%7Ctwcamp%5Etweetembed%7Ctwterm%5E1664214331213619203%7Ctwgr%5Ed900555c025eae180629b44269c0d943c564c9f4%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadaprabha-epaper-dh5b726df62aef498792fe138d20d7356d%2Fpratibhatanaaniratakustipatugalasamasyeyannukendrasukshmavaaginibhaayisuttidekridasachivaanuraagthaakur-newsid-n505357314

ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ – ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!