ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಿದ ಆಸ್ಟ್ರೇಲಿಯಾ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ ದಂಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಸ್ಟ್ರೇಲಿಯಾ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ ಮತ್ತು ಪತ್ನಿ ವಿನಿ ರಾಮನ್‌ ತಮ್ಮ ಕುಟುಂಬಕ್ಕೆ ಹೊಸ ಅತಿಥಿಯನ್ನು ಸ್ವಾಗತಿಸಿದ್ದಾರೆ. ಭಾರತೀಯ ಮೂಲದ ವಿನಿ ರಾಮನ್ ಪುಟಾಣಿಗೆ ಜನ್ಮ ನೀಡಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ತಾವು ತಂದೆಯಾಗಿರುವ ವಿಷಯವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ತಿಳಿಸಿದ್ದಾರೆ.

ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವಿನಿ ರಾಮನ್‌ ದಂಪತಿ 11-09-2023ರಂದು ‘ಲೊಗಾನ್ ಮಾವೆರಿಕ್‌ ಮ್ಯಾಕ್ಸ್‌ವೆಲ್’ ಅವರನ್ನು ತಮ್ಮ ಕುಟುಂಬದೊಳಗೆ ಸ್ವಾಗತಿಸಿದ್ದು, ಇಂದು ಈ ವಿಷಯವನ್ನು ಹೊರ ಜಗತ್ತಿಗೆ ತಿಳಿಸಿದ್ದಾರೆ. ವಿನಿ ರಾಮನ್‌ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್‌ ತಮ್ಮ ಮಗನ ಕೈಹಿಡಿದಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ತಿಂಗಳಷ್ಟೇ ವಿನಿ ರಾಮನ್ ತಾವು ಸೆಪ್ಟೆಂಬರ್‌ನಲ್ಲಿ ತಾಯಿಯಾಗಲಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಕಳೆದ ತಿಂಗಳಷ್ಟೇ ವಿನಿ ರಾಮನ್ ಅವರಿಗೆ ಭಾರತೀಯ ಸಂಪ್ರದಾಯದಂತೆ ಸೀಮಂತವನ್ನು ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!