ಏಕದಿನ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಮ್ಯಾಕ್ಸ್​ವೆಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಕದಿನ ಕ್ರಿಕೆಟ್​ನಿಂದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಇದಾಗ್ಯೂ ಅವರು ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು ಸೂಕ್ತ ಸಮಯ. ಇದೇ ಕಾರಣದಿಂದ ನಿವೃತ್ತಿ ಘೋಷಿಸಿರುವುದಾಗಿ ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪರ ಈವರೆಗೆ 149 ಏಕದಿನ ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ 136 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಒಟ್ಟು 3990 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ದ್ವಿಶತಕ ಹಾಗೂ 4 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!