ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ವರ್ಷದ ಬಜೆಟ್ ಮಂಡನೆ ವೇಳೆ ಮಹತ್ವದ ಘೋಷಣೆ ಮಾಡಿರುವ ಸಿಎಂ ನಮ್ಮ ರಾಜ್ಯದ ಧಾರ್ಮಿಕ ಸ್ಥಳಗಳಿಗೆ ಒತ್ತು ನೀಡಿದ್ದಾರೆ. ದೇವಾಲಯದ ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಹಾಗೂ ನೈರ್ಮಲ್ಯ ವ್ಯವಸ್ಥೆ, ಸುಸಜ್ಜಿತ ವಸತಿ ನಿಲಯಗಳು ಹಾಗೂ ಅನುಕೂಲಕರ ದರುಶನದ ಬಗ್ಗೆ ಪ್ರಾಧಿಕಾರ ಗಮನವಹಿಸಲಿದೆ.



