ದಿಗಂತ ವರದಿ ವಿಜಯಪುರ:
ಆಟೋ, ಕ್ಯಾಂಟರ್ ವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಕ್ರಾಸ್ ಹತ್ತಿರ ಶನಿವಾರ ನಡೆದಿದೆ.
ಚವನಭಾವಿ ಗ್ರಾಮದ ಕರೆಪ್ಪ ನಾಲತವಾಡ (55) ಮೃತ ವ್ಯಕ್ತಿ. ಈ ಘಟನೆಯಲ್ಲಿ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಮುದ್ದೇಬಿಹಾಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.