ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಬೇಗುಸರಾಯ್‍ನಲ್ಲಿ ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇತರ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದ ವೀಡಿಯೋಗಳನ್ನು ಜನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾದ ಸಂತ್ರಸ್ತರ ರಕ್ತಸಿಕ್ತ ದೇಹಗಳು ವೀಡಿಯೋದಲ್ಲಿ ದಾಖಲಾಗಿವೆ.