ಹೊಸದಿಂತ ಡಿಜಿಟಲ್ ಡೆಸ್ಕ್:
ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಾಗಪ್ಪ ಬ್ಲ್ಯಾಕ್ ಬಳಿ ನಡೆದಿದೆ.
ವಿದ್ಯಾರ್ಥಿಗಳು, ಚಾಲಕ ಸೇರಿ ಒಟ್ಟು 11 ಮಂದಿ ಆಟೋದಲ್ಲಿ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್, ಆಟೋಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.