ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ: ಆಟೋ ಚಾಲಕ ಅರೆಸ್ಟ್

 ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ:

ಲಾಂಗ್ ಮೂಲಕ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದ ಆಟೋ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಗೌರಿಬಿದನೂರು ತಾಲೂಕಿನ ವೈಚಕೂರಹಳ್ಳಿ ನಿವಾಸಿ ಆಟೋ ಚಾಲಕ ಅನಿಲ್ ಕುಮಾರ್ ತನ್ನ ಹುಟ್ಟು ಹಬ್ಬದಂದು ಕಿಂಗ್ ಎಂದು ಕೇಕ್ ಮಾಡಿಸಿ ಲಾಂಗ್‌ನಲ್ಲಿ ಕಟ್ ಮಾಡಿ ಬರ್ತ್‌ಡೇ ಆಚರಿಸಿಕೊಂಡಿದ್ದ. ಅಲ್ಲದೆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ.
ಈ ವೀಡಿಯೋ ನೋಡಿದ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಆಟೋ ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!