November 25, 2026
Wednesday, November 25, 2026
spot_img

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ ಆರೋಪ: ಆಟೋ ಚಾಲಕನ ಬಂಧನ

ಹೊಸದಿಗಂತ ವರದಿ ಮಡಿಕೇರಿ:

ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಆಟೋ ಚಾಲಕನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗಿದ್ದು, ಮಣಿಕಂಠ ಎಂಬ ಆಟೋ ಚಾಲಕ ಈ ಕೃತ್ಯದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಬಾಲಕಿಗೆ ಪರಿಚಯವಿದ್ದ ಈತ ಮನೆಗೆ ಡ್ರಾಪ್ ನೀಡುವ ನೆಪದಲ್ಲಿ ಬಾಲಕಿಯನ್ನು ಆಟೋದ ಮುಂದಿನ‌ ಆಸನದಲ್ಲಿ ಕೂರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಆರೋಪಿಸಲಾಗಿದೆ.

ಇದನ್ನೂ ಓದಿ:

ಮನೆಗೆ ಬಂದ ಬಾಲಕಿ ನೋವಿನಿಂದ ನರಳಾಡುತ್ತಿರುವುದನ್ನು ಗಮನಿಸಿದ ಪೋಷಕರು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ ಸಂದರ್ಭ ವೈದ್ಯಕೀಯ ಪರೀಕ್ಷೆಯಲ್ಲಿ ದೌರ್ಜನ್ಯದ ವಿಚಾರ ಬೆಳಕಿಗೆ ಬಂದಿರುವುದಾಗಿ ಹೇಳಲಾಗಿದೆ‌.

ಈ ಸಂಬಂಧ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Must Read

Skip to toolbar