August 31, 2026
Monday, August 31, 2026
spot_img

ಶಾಲಾ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆಟೋ ಚಾಲಕನ ಬಂಧನ

ಹೊಸದಿಗಂತ ವರದಿ ಸುಂಟಿಕೊಪ್ಪ:

ಮೊಬೈಲ್‌ನಲ್ಲಿ ಆಶ್ಲೀಲ ಚಿತ್ರಗಳನ್ನು ತೋರಿಸಿ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಸುಂಟಿಕೊಪ್ಪ ಸಮೀಪದ ನಾಕೂರು ಕಾನ್‌ಬೈಲ್ ನಿವಾಸಿ ಆಟೋ ಚಾಲಕ ಪ್ರವೀಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 29 ರಂದು ಸಂಜೆ ಶಾಲೆಯಿಂದ ಮನೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಪ್ರವೀಣ್, ತನ್ನ ಮೊಬೈಲ್‌ನಲ್ಲಿ ವಿಡಿಯೋ ತೋರಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕಿಯ ಪೋಷಕರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಬೆದರಿಕೆಯಿಂದ ಭಯಗೊಂಡಿದ್ದ ಬಾಲಕಿ ಆರಂಭದಲ್ಲಿ ತನಗಾದ ದೌರ್ಜನ್ಯದ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿರಲಿಲ್ಲ. ನಂತರ ತಾಯಿಗೆ ಬಾಲಕಿ ವಿಷಯ ತಿಳಿಸಿದ ಮೇರೆಗೆ ಆ. 3ರಂದು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದಾರೆ.

ಆರೋಪಿಯ ವಿರುದ್ಧ ಬಿಎನ್‌ಎಸ್, ಪೋಕ್ಸೊ, ಜಾತಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪ್ರವೀಣ್’ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !