ದೇಶದ ಹೆಮ್ಮೆಯ ಪ್ರಧಾನಿಗೆ ಹುಟ್ಟು ಹಬ್ಬದ ಸಂಭ್ರಮ, ಬಂಪರ್‌ ಗಿಫ್ಟ್‌ ಘೋಷಿಸಿದ ಆಟೋ ಯೂನಿಯನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಾಗತಿಕ ನಾಯಕ, ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ದೇಶಾದ್ಯಂತ ಇಂದು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಿದ್ದಾರೆ. ಅದರಂತೆಯೇ ಅವರ ತವರು ರಾಜ್ಯ ಗುಜರಾತ್‌ನ ಸೂರತ್ ನಗರದಲ್ಲಿ ಆಟೋ ಯೂನಿಯನ್ ಪ್ರಯಾಣಿಕರಿಗೆ ಬಂಪರ್ ರಿಯಾಯಿತಿ ಕೊಡುಗೆಯನ್ನು ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ 73 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಸೂರತ್ ನಗರದಲ್ಲಿ 1,000 ಆಟೋ ಚಾಲಕರು ಪ್ರಯಾಣಿಕರಿಗೆ 30ರಷ್ಟು ರಿಯಾಯಿತಿ ಘೋಷಿಸಿದ್ದಾರೆ. ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು ಆಟೋ ಚಾಲಕರ ಉದಾರ ಕ್ರಮಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“1,000 ಆಟೋ ರಿಕ್ಷಾ ಚಾಲಕರು ಪ್ರಧಾನಿ ಮೋದಿಯವರ ಜನ್ಮದಿನದಂದು ಶೇಕಡಾ 30 ರಷ್ಟು ರಿಯಾಯಿತಿಯನ್ನು ಘೋಷಿಸಿದ್ದಾರೆ. ಇನ್ನೂ 73 ಆಟೋ ರಿಕ್ಷಾ ಚಾಲಕರು 100 ಪ್ರತಿಶತ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಈ ಆಟೋ ರಿಕ್ಷಾ ಚಾಲಕರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಹೇಳಿದ್ದಾರೆ.

ಬಿಜೆಪಿಯು ಪ್ರಧಾನಿಯವರ ಜನ್ಮದಿನದಂದು ಸೇವಾ ಪಖ್ವಾರಾ ಎಂಬ ಎರಡು ವಾರಗಳ ಅಭಿಯಾನವನ್ನು ಪ್ರಾರಂಭಿಸಿತು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ, ಆರೋಗ್ಯ ಶಿಬಿರದಂತಹ ಕಲ್ಯಾಣ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!