ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರ ಮುಷ್ಕರ: ನಾಳೆ ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಆಟೊರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟವು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿವೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್‌ ಆಗುವ ಸಾಧ್ಯತೆ ಇದೆ.

ಒಟ್ಟೂ 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ನಾಳೆ ಬಂದ್ ಆಗಲಿದೆ ಎಂದು ಸಂಘದ ಮುಖಂಡರು ಹೇಳುತ್ತಿದ್ದಾರೆ. ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಎಲೆಕ್ಷನ್ ಒಳಗೆ ಚಾಲಕರಿಗೆ ಸಿಹಿ ಸುದ್ದಿ ಕೊಡುತ್ತೇವೆ ಎಂಬ ಭರವಸೆ ನೀಡಿದ್ದರು. ಆರ್​ಟಿಓಯಿಂದ ರ್ಯಾಪಿಡೋ ಬ್ಯಾನ್ ಮಾಡಲು ವರದಿ ಕೇಳಿದ್ದೀನಿ. ವರದಿ ನನ್ನ ಕೈ ಸೇರಿದ್ದೆ ಚಾಲಕರಿಗೆ ಸಿಹಿ ಸುದ್ದಿ ಕೊಡುತ್ತೇನೆ ಎಂದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!