Thursday, October 6, 2022

Latest Posts

ಕಾಲುವೆಗೆ ಆಟೋ‌ ಪಲ್ಟಿ: ಇಬ್ಬರು ದುರ್ಮರಣ ಹಲವರು ನಾಪತ್ತೆ

ಹೊಸದಿಗಂತ ವರದಿ ಬಳ್ಳಾರಿ:

ತುಂಗಭದ್ರಾ ಎಚ್ಎಲ್‌ಸಿ ಕಾಲುವೆಗೆ ಆಟೋವೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟ ಘಟನೆ ಸಮೀಪ ಕೊಳಗಲ್ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಆಟೋದಲ್ಲಿ 10ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದು, ಆಯತಪ್ಪಿ ಆಟೋ ಕಾಲುವೆಗೆ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ, ಉಳಿದವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಕೂಲಿ ಕಾರ್ಮಿಕರು ಎಂದು ಗುರುತಿಸಲಾಗಿದೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮೀಣ ಠಾಣೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಭೇಟಿ‌ ನೀಡಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಜೆಸಿಬಿ ಮೂಲಕ ಉಳಿದವರ ಶೋಧ ಕಾರ್ಯ ಹಾಗೂ ಆಟೋ ಮೇಲಕ್ಕೆತ್ತುವ ಕಾರ್ಯ ನಡೆದಿದೆ. ಕಾಲುವೆ ಭರ್ತಿಯಾಗಿ ಹರಿಯುತ್ತಿದ್ದು ರಕ್ಷಣಾ ಕಾರ್ಯಕ್ಕೆ ಸಮಸ್ಯೆಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!