ಹೊಸ ದಿಗಂತ ವರದಿ, ಹಾವೇರಿ:
ಆಟೋ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ,ಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿ ನಾಲ್ವರಿಗೆ ಗಾಯವಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿ ಶನಿವಾರ ನಡೆದಿದೆ.
ಮೃತ ಮಹಿಳೆಯರನ್ನು ಯಶೋಧ ಮತ್ತು ಬಸಮ್ಮ ಎನ್ನಲಾಗಿದ್ದು, ದಾವಣಗೆರೆ ನಗರದಿಂದ ಚಳಗೇರಿ ಗ್ರಾಮಕ್ಕೆ ಅಂತ್ಯಸಂಸ್ಕಾರ ಆಗಮಿಸಿದ್ದರು. ಅಂತ್ಯ ಸಂಸ್ಕಾರ ಮುಗಿಸಿ ವಾಪಸು ಊರಿಗೆ ಹೋಗುತ್ತಿದ್ದ ವೇಳೆ ಕ್ಯಾಂಟರ್ ಆಟೋ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.