ಹೊಸದಿಗಂತ ಕುಶಾಲನಗರ:
ಆಟೋರಿಕ್ಷಾ ಡಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬರು ಸಾವಿಗೀಡಾದ ಘಟನೆ ಹಾಸನ-ಕುಶಾಲನಗರ ಹೆದ್ದಾರಿಯ ಕೂಡಿಗೆ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ಗ್ರಾಮದ ಗಂಗಯ್ಯ ಎಂಬವರ ಪುತ್ರ ಸತೀಶ್ (40) ಎಂಬವರೇ ಮೃತರಾದವರು. ಕೂಡಿಗೆಯಲ್ಲಿ ಅವರು ರಸ್ತೆ ದಾಟುವ ಸಂದರ್ಭ ಆಟೋ ಡಿಕ್ಕಿಯಾದ ಪರಿಣಾಮ ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಕುಶಾಲನಗರ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ಸಾವಿಗೀಡಾಗಿದ್ದಾರೆ.
ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದು, ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.