ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಆಟೋ ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಹಿಳೆಯರು ಸೇರಿದಂತೆ 10 ಜನರು ಸಾವನ್ನಪ್ಪಿದ್ದು, 4 ಜನರು ಗಾಯಗೊಂಡಿದ್ದಾರೆ.
ಇನ್ನು ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ, ಅವರನ್ನು ಉತ್ತಮ ಚಿಕಿತ್ಸೆಗಾಗಿ ಆಸ್ಪತ್ರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರ್ದೋಯಿ ಪೊಲೀಸ್ ವರಿಷ್ಠಾಧಿಕಾರಿ ನೀರಜ್ ಕುಮಾರ್ ಜದೌನ್ ಹೇಳಿದ್ದಾರೆ.
ಇತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೃತರ ಕುಟುಂಬದವರಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಮುಂದಿನ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.