Wednesday, February 28, 2024

ಆಟೋರಿಕ್ಷಾ ಪಲ್ಟಿ: ಇಬ್ಬರು ಸಾವು

ಹೊಸದಿಗಂತ ವರದಿ,ತುಮಕೂರು:

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ಪಲ್ಟಿಯಾಗಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೆ ಮೃತಪಟ್ಟಿರುವ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ನಲಿಗಾನಹಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ
ಇನ್ನು ಕೋಣನ ಕುರಿಕೆ ಬಂಡಪ್ಪ 55 ಹಾಗೂ ಸಣ್ಣ ಸಿದ್ದಪ್ಪನವರ ಬಂಡಪ್ಪ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ
ಆಟೋದಲ್ಲಿ ಬಿ ದೊಡ್ಡ ಹಟ್ಟಿ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ಏಳು ಜನ ಪ್ರಯಾಣಿಕರು ತೆರಳುತ್ತಿದ್ದರು , ನಲಿ ಗಾನ ಹಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ
ಹಾಗೂ ನಾಗಮ್ಮ ಎಂಬ ಮಹಿಳೆಗೆ ತೀವ್ರತರಹದ ಗಾಯಗಳಾಗಿದ್ದು ಗಾಯಾಳುಗಳನ್ನು ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಘಟನೆ ತಿಳಿದು ಸ್ಥಳೀಯ ಶಾಸಕ ವೆಂಕಟರಮಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!