ಹೊಸದಿಗಂತ ಡಿಜಿಟಲ್ ಡೆಸ್ಕ್ :
ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಬುಡಕಟ್ಟು ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಕಾರ್ಮಿಕರು ಸಾವನ್ನಪ್ಪಿದ್ದು, ಓರ್ವ ಕಾರ್ಮಿಕ ಕಾಣೆಯಾಗಿದ್ದಾರೆ.
ಎರಡೂ ಮೃತದೇಹಗಳನ್ನು ಹೊರತೆಗೆದಿದ್ದು, ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದಾರೆ.
ಮೃತ ಕಾರ್ಮಿಕರನ್ನು ನೇಪಾಳದ ನಿವಾಸಿಗಳಾದ 19 ವರ್ಷದ ರಾಮ್ ಬುದ್ಧ ಮತ್ತು ಚಂಬಾ ನಿವಾಸಿ ರಾಕೇಶ್ ಎಂದು ಗುರುತಿಸಲಾಗಿದೆ. ಅದೇ ಸಮಯದಲ್ಲಿ, ನಾಪತ್ತೆಯಾದ ವ್ಯಕ್ತಿಯನ್ನು ನೇಪಾಳದ ನಿವಾಸಿ 27 ವರ್ಷದ ತ್ಶೆರಿಂಗ್ ಲಾಮಾ ಎಂದು ಗುರುತಿಸಲಾಗಿದೆ. ಜಿಲ್ಲಾ ಕೇಂದ್ರ ಕೀಲಾಂಗ್ನಿಂದ 35 ಕಿಮೀ ದೂರದಲ್ಲಿರುವ ಶಿಕುನ್ಲಾ ಪಾಸ್ ಬಳಿ ಅಪಘಾತ ಸಂಭವಿಸಿದೆ.
ಈ ಹಿಂದೆ ಲಾಹೌಲ್-ಸ್ಪಿತಿಯಲ್ಲಿ ಭಾರೀ ಹಿಮಪಾತವಾಗಿತ್ತು. ಇದರಿಂದಾಗಿ ಹಲವು ರಸ್ತೆಗಳು ಬಂದ್ ಆಗಿವೆ.