ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) ಕನಿಷ್ಠ 47ಕ್ಕೂ ಹೆಚ್ಚು ಕಾರ್ಮಿಕರು ಹಿಮದಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 50ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಮಾನಾದ ಗಡಿ ಪ್ರದೇಶದ ಗಡಿ ರಸ್ತೆ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 57 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಈ ಕಾರ್ಮಿಕರಲ್ಲಿ 10 ಕಾರ್ಮಿಕರನ್ನು ರಕ್ಷಿಸಿ ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ಉತ್ತರಾಖಂಡ ಪೊಲೀಸ್ ವಕ್ತಾರ ನೀಲೇಶ್ ಆನಂದ್ ಭರ್ನೆ ಎಎನ್‌ಐಗೆ ತಿಳಿಸಿದ್ದಾರೆ.
ಮೂರರಿಂದ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಆದರೆ ಭಾರೀ ಹಿಮಪಾತದಿಂದಾಗಿ, ರಕ್ಷಣಾ ತಂಡ ಸ್ಥಳಕ್ಕೆ ತಲುಪಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದೆ ಎಂದು ಬಿಆರ್‌ಒ (ಗಡಿ ರಸ್ತೆ ಸಂಸ್ಥೆ) ಕಾರ್ಯನಿರ್ವಾಹಕ ಎಂಜಿನಿಯರ್ ಸಿಆರ್ ಮೀನಾ ಅವರು ಹೇಳಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯ ಬಗ್ಗೆ ಎಕ್ಸ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದು, ಐಟಿಬಿಪಿ, ಬಿಆರ್‌ಒ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.