ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 1261 ಪಶುವೈದ್ಯಾಧಿಕಾರಿಗಳು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಕರ್ನಾಟಕ ( AHVS ಕರ್ನಾಟಕ ) ನೇಮಕಾತಿ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆ, ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ahvs.kar.nic.in ಗೆ ಭೇಟಿ ನೀಡಿ.