‘ಆರ್.ಆರ್.ಆರ್’ ಗೆ ಪ್ರಶಸ್ತಿಯ ಗರಿ: ಮತ್ತೆ ಮೂರು ಅವಾರ್ಡ್ ಬಾಚಿಕೊಂಡ ಸಿನಿಮಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ‘ಆರ್.ಆರ್.ಆರ್’ (RRR) ಸಿನಿಮಾ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ.

ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಇದರ ಬೆನ್ನಲ್ಲೇ ಚಿತ್ರತಂಡಬಿ ಆಸ್ಕರ್ ಮೇಲೆ ಕಣ್ಣಿತ್ತಿದ್ದು, ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!