ಪ್ರಧಾನಿ ನರೇಂದ್ರ ಮೋದಿಗೆ ‘ಲೋಕಮಾನ್ಯ ತಿಲಕ್ ‘ ಪ್ರಶಸ್ತಿ ಪ್ರದಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಮಂಗಳವಾರ ಸ್ವೀಕರಿಸಿದರು.

ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ರಮೇಶ್ ಬಯಾಸ್, ಮುಖ್ಯಮಂತ್ರಿ ಏಕನಾಥ್ ಸಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್, ಅಜಿತ್ ಪವಾರ್, ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಸಿಂಧೆ , ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾಗಿಯಾಗಿದ್ದರು.

ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ್ದ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಆ.1 ರಂದು ದೇಶದ ಅಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರುಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ಲೋಕಮಾನ್ಯ ಟ್ರಸ್ಟ್ ನೀಡಿದ ನಗದನ್ನು ನವಾಮಿ ಗಂಗಾ ಸ್ವಚ್ಛತಾ ಕಾರ್ಯಕ್ರಮಕ್ಕೆ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು. ನನಗೆ ಇದು ಅತ್ಯಂತ ಅವಿಸ್ಮರಣೀಯ ಕಾರ್ಯಕ್ರಮ. ಈವರೆಗೂ ಎಷ್ಟೋ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇನೆ. ಆದರೆ ಒಬ್ಬ ಅಪ್ಪಟ ದೇಶಪ್ರೇಮಿಯಾಗಿದ್ದ ಬಾಲಗಂಗಾಧರನಾಥ್ ತಿಲಕ್ ಹೆಸರಿನಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ನನ್ನ ಪೂರ್ವಜನ್ಮದ ಪುಣ್ಯ ಎಂದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!