ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಂದ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿ ಅವರಿಗೆ ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು.
ಈ ವೇಳೆ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ಇದೇ ಸಂದರ್ಭಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ಗುರುಕುಲದ ಸುಮಾರು 150 ವೇದ ವಟುಗಳು ಹಾಗೂ 50 ಜನ ಮಹಿಳೆಯರು ಒಟ್ಟಿಗೆ ಭಗವದ್ಗೀತೆ ಪಠಣ ಮಾಡಿದರು. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಕಾರ್ಯದರ್ಶಿ ಎಂ.ಕೆ.ಹೆಗಡೆ, ಗಣೇಶ ಹೆಗಡೆ, ವೆಂಕಟ್ರಮಣ ಹೆಗಡೆ ಮೊದಲಾದವರು ಇದ್ದರು.