ವಕ್ಫ್‌ ತಿದ್ದುಪಡಿ ಕುರಿತು ಜನರಲ್ಲಿ ಜಾಗೃತಿ: ಬಿಜೆಪಿಯಿಂದ ‘ಜನಜಾಗರಣ’ ಸಮಾವೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕ್ಫ್‌ ತಿದ್ದುಪಡಿ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಏ. 20ರಿಂದ ರಾಷ್ಟ್ರಮಟ್ಟದ ‘ಜನಜಾಗರಣ’ ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.

ತಮ್ಮ ಮತ ಬ್ಯಾಂಕ್‌ ರಾಜಕೀಯಕ್ಕಾಗಿ ಕಾಯ್ದೆ ವಿರುದ್ಧ ವಿರೋಧ ಪಕ್ಷಗಳು ಮುಸ್ಲಿಮರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿವೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಲಾಗುತ್ತಿರುವ ‘ಜನಜಾಗರಣ’ ಸಮಾವೇಶದಲ್ಲಿ ರಾಷ್ಟ್ರವ್ಯಾಪಿ ಪಕ್ಷದ ವಿವಿಧ ಹಂತಗಳ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.

ಈ ಸಮಾವೇಶದಲ್ಲಿ, ವಕ್ಫ್‌ ಮಂಡಳಿ ಸದಸ್ಯರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಪಕ್ಷದ ಮುಖಂಡರು, ಅಲ್ಪಸಂಖ್ಯಾತ ವಿಭಾಗದ ಪ್ರಮುಖರು ಈ ಪಾಲ್ಗೊಳ್ಳಲಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರು ಇರುವುದರ ಹಿಂದೆ ಆಸ್ತಿಗಳ ನಿರ್ವಹಣೆಯ ಉದ್ದೇಶವಿದೆಯೇ ಹೊರತು, ಧರ್ಮಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!