September 20, 2026
Sunday, September 20, 2026
spot_img

ನವರಂಗಿ ಆಟ ಆಡಿದ್ರೆ ಹಿಂಗೇ ಆಗೋದು! ಬರ್ತ್ ಡೇ ದಿನ ರೀಲ್ಸ್ ಮಾಡೋಕೆ ಹೋಗಿ ಪೊಲೀಸರ ಅತಿಥಿಯಾದ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯಲು ಮಾಡಿದ ಅಪಾಯಕಾರಿ ಸಾಹಸವೊಂದು ಯುವಕನನ್ನು ಪೊಲೀಸ್ ಠಾಣೆ ಮೆಟ್ಟಿಲೇರಿಸುವಂತಾಗಿದೆ. ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಬೇಕೆಂಬ ಉದ್ದೇಶದಿಂದ ರಸ್ತೆ ಮಧ್ಯೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವಿಡಿಯೋ ಮಾಡಿದ್ದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಫಹಾದ್ ಶೇಖ್ ಎಂದು ಗುರುತಿಸಲಾಗಿದೆ. ತನ್ನ 33ನೇ ಹುಟ್ಟುಹಬ್ಬದ ಪ್ರಯುಕ್ತ ಗೋರೆಗಾಂವ್ ಪಶ್ಚಿಮದ ರಾಮ್ ಮಂದಿರ್ ರಸ್ತೆಯಲ್ಲಿ ಪೆಟ್ರೋಲ್ ಬಳಸಿ ರಸ್ತೆಯ ಮೇಲೆ ‘33’ ಎಂದು ಬರೆದು ಅದಕ್ಕೆ ಬೆಂಕಿ ಹಚ್ಚಿ ರೀಲ್ಸ್ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ:

ಘಟನೆಯ ಗಂಭೀರತೆಯನ್ನು ಮನಗಂಡ ಪೊಲೀಸರು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತಂದ ಆರೋಪದಡಿ ಫಹಾದ್ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. ಬೆಂಕಿಯಿಂದ ರಸ್ತೆ ಬಳಕೆದಾರರಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದುದಲ್ಲದೆ, ಸಮೀಪದ ಪ್ರದೇಶಕ್ಕೂ ಹಾನಿ ಸಂಭವಿಸಬಹುದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಗೆ ನೆಟ್ಟಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೇವಲ ವೈರಲ್ ಆಗುವ ಉದ್ದೇಶಕ್ಕೆ ಇಂತಹ ಅಪಾಯಕಾರಿ ಕೃತ್ಯಗಳನ್ನು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಅಗತ್ಯ ಎಂದು ಒತ್ತಾಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !