ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಚಿಮ್ಮಿತು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಉಪಗ್ರಹದ ಗುರಿ ಡಾಕಿಂಗ್ ಭಾರತೀಯ ಕಾಲಮಾನ ಪ್ರಕಾರ ನಾಳೆ ಸಾಯಂಕಾಲ 4.30 ಕ್ಕೆ ನಿಗದಿಯಾಗಿದೆ ಎಂದು ನಾಸಾ ತಿಳಿಸಿದೆ.
ಭಾರತದ ಕ್ಯಾಪ್ಟನ್ ಶುಭಾಂಶು ಶುಕ್ಲಾ ಇತಿಹಾಸ ಬರೆಯಲು ಸಜ್ಜಾಗಿದ್ದು, ಇಂದು ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಲ್ಲಿರುವ ಲಾಂಚ್ ಕಾಂಪ್ಲೆಕ್ಸ್ 39A ನಿಂದ ಆಕ್ಸಿಯಮ್ -4 ಮಿಷನ್ ಉಡಾವಣೆಗೊಳ್ಳಲಿದೆ. ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಕ್ಸಿಯಮ್ -4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳುತ್ತಿದ್ದಾರೆ.