ಬಿಜೆಪಿಗೆ ಗುಡ್‌ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.

ಇಂದು ಮಧ್ಯಾಹ್ನ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ ಎಂದು ಹೇಳಿದ್ದಾರೆ.

ಆಯನೂರು ಮಂಜುನಾಥ್​ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಟಿಕೆಟ್​ ಸಿಗುವುದು ಖಾತ್ರಿ ಇಲ್ಲದಿರುವುದರಿಂದ ರಾಜೀನಾಮೆ ಘೋಷಿಸಿದ್ದಾರೆ.

ಶಿಮಮೊಗ್ಗದಲ್ಲಿಂದು ಬೆಳ್ಳಂಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!