ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜ. 22 ರಂದು ರಾಮಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ದಿನ ಸಾವಿರಾರು ಭಕ್ತರು ರಾಮಮಂದಿರಕ್ಕೆ ಭೇಟಿ ನೀಡುತ್ತಾರೆ ಮತ್ತು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ. ಕೆಲವು ರಾಮ ಭಕ್ತರು ಭಗವಾನ್ ಶ್ರೀರಾಮನ ಜನ್ಮಸ್ಥಳಕ್ಕೆ ಭೇಟಿ ನೀಡಲು ತಮ್ಮ ಸ್ವಂತ ಊರಿನಿಂದ ಚಾರಣ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ ಮತ್ತು ಈಗಾಗಲೇ ಅಯೋಧ್ಯೆಯ ಕಡೆಗೆ ತಮ್ಮ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ.
ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳ ಭಕ್ತರು ಯಾತ್ರೆ ಆರಂಭಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸದ್ಯ ಇಲ್ಲಿ ವಿಶೇಷ ವಿಡಿಯೋ ವೈರಲ್ ಆಗುತ್ತಿದೆ. ರಾಮನ ಭಕ್ತರೊಬ್ಬರು ತಲೆ ಕೆಳಗಾಗಿ ನಡೆಯುತ್ತಾ ಅಯೋಧ್ಯೆಗೆ ಪಾದಯಾತ್ರೆ ಹೋಗಲು ನಿರ್ಧರಿಸಿದ್ದಾರೆ.
ರಾಮ ಭಕ್ತರೊಬ್ಬರು ಶ್ರೀರಾಮನ ದರ್ಶನ ಪಡೆಯಲು ಅಯೋಧ್ಯೆಗೆ ತಲೆ ಕೆಳಗಾಗಿ ನಡೆಯುತ್ತಿರುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ಇವರು ಯಾವ ಊರಿನಿಂದ ಪಾದಯತ್ರೆ ಹೊರಟಿದ್ದಾರೆ ಹಾಗೂ ಅವರ ವೈಯಕ್ತಿಕ ವಿವರವಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.