Wednesday, February 28, 2024

ಡಿ.15ರೊಳಗೆ ಅಯೋಧ್ಯೆ ಏರ್‌ಪೋರ್ಟ್‌ ಸಿದ್ಧ : ಯೋಗಿ ಆದಿತ್ಯನಾಥ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಒಂದು ತಿಂಗಳ ಮುಂಚೆಯೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿಸೆಂಬರ್ 15 ರೊಳಗೆ ಸಿದ್ಧವಾಗಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಿಮಾನ ನಿಲ್ದಾಣವನ್ನು ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌’ ಎಂದು ಕರೆಯಲಾಗುವುದು ಎಂದರು.

ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿಕೆ ಸಿಂಗ್ ಅವರೊಂದಿಗೆ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿ, ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!