August 13, 2026
Thursday, August 13, 2026
spot_img

ಅಯೋಧ್ಯೆ ದೇಣಿಗೆ ವಿವಾದ: SIT ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಪ್ರಕರಣವನ್ನು ರಾಜಕೀಯ ವಿಷಯವನ್ನಾಗಿ ಮಾಡಬಾರದು ಎಂದು ಸ್ಪಷ್ಟ ಸಂದೇಶ ನೀಡಿದೆ. ತನಿಖೆ ಪಾರದರ್ಶಕವಾಗಿ ಮುಂದುವರಿಯಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ರಾಜಕೀಯ ಬೇಡ ಎಂದ ನ್ಯಾಯಪೀಠ

ವಿಚಾರಣೆ ವೇಳೆ ಅರ್ಜಿದಾರರಿಗೆ ಎಚ್ಚರಿಕೆ ನೀಡಿದ ನ್ಯಾಯಪೀಠ, ಪ್ರಕರಣದ ತನಿಖೆ ಕಾನೂನು ಪ್ರಕ್ರಿಯೆಯಂತೆ ಸಾಗಲು ಅವಕಾಶ ನೀಡಬೇಕು ಎಂದು ಸೂಚಿಸಿತು.

ಇದನ್ನೂ ಓದಿ:

ಎಂಟು ಆರೋಪಿಗಳ ಬಂಧನ

ಉತ್ತರ ಪ್ರದೇಶ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಿ, ಪ್ರಕರಣದಲ್ಲಿ ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಪ್ರಾಥಮಿಕ ತನಿಖೆಯನ್ನು ಎಸ್‌ಐಟಿ ನಡೆಸಿದ್ದು, ಈಗ ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ ಎಂದರು.

ಜುಲೈ 27ಕ್ಕೆ ಮುಂದಿನ ವಿಚಾರಣೆ

ಸ್ಥಿತಿಗತಿ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕ ಅಗತ್ಯ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ನಿಗದಿಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !