ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮ ಮಂದಿರದ ಲೋಕಾರ್ಪಣೆಯ ಆಹ್ವಾನ ಕಾಂಗ್ರೆಸ್ ನಾಯಕರನ್ನೂ ತಲುಪಿದ್ದು, ಇದಕ್ಕೆ ಪ್ರತಿಯಾಗಿ ನಾಯಕರುಗಳು ಧನ್ಯವಾದ ತಿಳಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ದೇಶದ ಗಣ್ಯರುಗಳಿಗೆ ಆಹ್ವಾನ ಪತ್ರ ಕಳುಹಿಸುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡೆ ಸೋನಿಯಾ ಗಾಂಧಿ, ಪಕ್ಷದ ನಾಯಕ ಅಧೀರ್ ರಂಜನ್ ಅವರು ಈ ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ್ದಾರೆ.
ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಜ.22 ರಂದು ಕಾದುನೋಡಿ ಎಂದಿದ್ದಾರೆ. ನಮಗೆ ಆಮಂತ್ರಣ ಪತ್ರಿಕೆ ಸಿಕ್ಕಿದೆ. ಆಹ್ವಾನಕ್ಕೆ ನಾವೂ ಆಭಾರಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ.