ಅಯೋಧ್ಯೆ ರೈಲು ನಿಲ್ದಾಣ ಇನ್ಮುಂದೆ ‘ಅಯೋಧ್ಯಾ ಧಾಮ’!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆ ರೈಲು ನಿಲ್ದಾಣದ (Ayodhya railway station) ಹೆಸರನ್ನು “ಅಯೋಧ್ಯಾ ಧಾಮ” (Ayodhya Dham)ಜಂಕ್ಷನ್ ಎಂದು ಬದಲಾಯಿಸಲಾಗಿದೆ ಎಂದು ಬಿಜೆಪಿ ಸಂಸದ ಲಲ್ಲು ಸಿಂಗ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಲಲ್ಲು ಸಿಂಗ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ನಗರದ ಅಯೋಧ್ಯೆ ರೈಲ್ವೆ ನಿಲ್ದಾಣವನ್ನು “ಅಯೋಧ್ಯಾ ಧಾಮ್” ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಮಾರ್ಗದರ್ಶನದಲ್ಲಿ “ಅಯೋಧ್ಯಾ ಜಂಕ್ಷನ್ “ಅಯೋಧ್ಯಾ ಧಾಮ” ಜಂಕ್ಷನ್ ಆಗಿ ಮಾರ್ಪಟ್ಟಿದೆ, ಹೊಸದಾಗಿ ನಿರ್ಮಿಸಲಾದ ಭವ್ಯವಾದ ಅಯೋಧ್ಯೆ ರೈಲು ನಿಲ್ದಾಣದ ಅಯೋಧ್ಯೆ ಜಂಕ್ಷನ್ ಹೆಸರನ್ನು ಸಾರ್ವಜನಿಕರ ನಿರೀಕ್ಷೆಯಂತೆ ಅಯೋಧ್ಯಾ ಧಾಮ ಜಂಕ್ಷನ್ ಎಂದು ಬದಲಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಿಲ್ದಾಣವನ್ನು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸರ್ಕಾರವು ಹಂಚಿಕೊಂಡ ಪ್ರಸ್ತಾವನೆಯನ್ನು ಭಾರತೀಯ ರೈಲ್ವೇ ಒಪ್ಪಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!