ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ.
ಆಚಾರ್ಯ ಸತ್ಯೇಂದ್ರ ದಾಸ್ ಅವರು ಫೆಬ್ರವರಿ 3 ರಂದು ಲಕ್ನೋದ SGPGI ನಲ್ಲಿರುವ ನರವಿಜ್ಞಾನ ವಾರ್ಡ್‌ನ ಹೈ ಡಿಪೆಂಡೆನ್ಸಿ ಯುನಿಟ್‌ಗೆ ಪಾರ್ಶ್ವವಾಯುವಿಗೆ ಒಳಗಾದ ನಂತರ ಗಂಭೀರ ಸ್ಥಿತಿಯಲ್ಲಿ ದಾಖಲಾಗಿದ್ದರು.
ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕೆಲವು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಯೋಗಕ್ಷೇಮ ವಿಚಾರಿಸಿದ್ದರು. ಸತ್ಯೇಂದ್ರ ದಾಸ್ ಅವರ ನಿಧನಕ್ಕೆ ಶೋಕ ವ್ಯಕ್ತವಾಗಿದೆ. ಆಚಾರ್ಯ ಸತ್ಯೇಂದ್ರ ದಾಸ್ ಅವರ ನಿಧನವನ್ನು ರಾಮ ಮಂದಿರ ಟ್ರಸ್ಟ್ ದೃಢಪಡಿಸಿದೆ.