ಉದ್ಘಾಟನೆಗೆ ಸಿದ್ಧವಾಗ್ತಿದೆ ಅಯೋಧ್ಯೆ ರಾಮಮಂದಿರ: ಬಿರುಸುಗೊಂಡ ಕಾಮಗಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬರುವ ಜನವರಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅದಕ್ಕೆ ಉತ್ತರ ಪ್ರದೇಶ ಸಜ್ಜಾಗುತ್ತಿದೆ. ಅಯೋಧ್ಯೆಯ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ವಿಸ್ತರಣೆ ಸೇರಿದಂತೆ ಮೂಲಸೌಕರ್ಯ ಕಾರ್ಯಗಳನ್ನು ಉತ್ತರ ಪ್ರದೇಶ ಸರ್ಕಾರ ತ್ವರಿತಗೊಳಿಸಿದೆ.

ಸಹದತ್‌ಗಂಜ್‌ನಿಂದ ನಯಾ ಘಾಟ್‌ವರೆಗಿನ 13 ಕಿಮೀ ರಸ್ತೆಯ ರಾಮ್ ಪಥ್‌ನ ಕಾಮಗಾರಿಯು ಪ್ರಗತಿಯಲ್ಲಿದೆ. ರಾಮಜಾನಕಿ ಪಥ ಮತ್ತು ಭಕ್ತಿ ಪಥ ನಿರ್ಮಾಣದ ರೂಪುರೇಷೆಯೂ ಸಿದ್ಧವಾಗಿದೆ. ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಸಹ ವಿಸ್ತರಿಸಲಾಗುತ್ತಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮಮಂದಿರ ಉದ್ಘಾಟನೆಗೆ ಬರುವಂತೆ ದೇಶದ ಜನರನ್ನು ಆಹ್ವಾನಿಸಿದ್ದಾರೆ. ಇದರ ಜೊತೆಗೆ ವಿವಿಧ ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸುತ್ತಿದ್ದಾರೆ.

ರಾಮಮಂದಿರ ನಿರ್ಮಾಣದ ಮೊದಲ ಹಂತವನ್ನು ಡಿಸೆಂಬರ್ 30ರೊಳಗೆ ಪೂರ್ಣಗೊಳಿಸಲು ದೇವಸ್ಥಾನದ ಟ್ರಸ್ಟ್ ನಿರ್ಧರಿಸಿದೆ. ಮೊದಲ ಹಂತದಲ್ಲಿ, ನೆಲ ಮಹಡಿಯಲ್ಲಿ ಐದು ಮಂಟಪಗಳಿರಲಿದ್ದು, ಅವುಗಳಲ್ಲಿ ಅತ್ಯಂತ ಪ್ರಮುಖವಾದ ಗರ್ಭಗುಡಿಯಲ್ಲಿ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಐದು ಮಂಟಪಗಳ ನಿರ್ಮಾಣದಲ್ಲಿ ಸುಮಾರು 160 ಕಂಬಗಳನ್ನು ಬಳಸಲಾಗಿದೆ. ದೇವಾಲಯದ ಕೆಳಗಿನ ಸ್ತಂಭದಲ್ಲಿ ಶ್ರೀರಾಮನ ಸಂಕ್ಷಿಪ್ತ ವಿವರಣೆಯನ್ನು ಪ್ರಾರಂಭಿಸಲಾಗುವುದು. ಈ ಎಲ್ಲಾ ಕಾಮಗಾರಿಗಳು ಡಿಸೆಂಬರ್ 30 ರೊಳಗೆ ಪೂರ್ಣಗೊಳ್ಳಲಿವೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!