ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆಯು ‘ಭಾರತದ ಹಬ್ಬ’: ಹೆಚ್ ಡಿಕೆ ಬಣ್ಣನೆ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು.

ಅವರ ತೀರ್ಮಾನಕ್ಕೂ ನನಗೂ ಸಂಬಂಧವಿಲ್ಲ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆಯಾಗಿತ್ತು, ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!