ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠೆ: ಕೊಹ್ಲಿ ದಂಪತಿಗೆ ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮಾ ಅವರಿಗೆ ಆಹ್ವಾನ ನೀಡಲಾಗಿದೆ.

ಸಮಾರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಇದಕ್ಕೆ ಹಲವಾರು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ದೇಶಾದ್ಯಂತ 1100 ಕ್ಕೂ ಹೆಚ್ಚು ಅತಿಥಿಗಳು ಆಗಮಿಸಲಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ಎಂಎಸ್ ಧೋನಿ ಅವರಿಗೂ ಆಹ್ವಾನ ನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!