August 29, 2026
Saturday, August 29, 2026
spot_img

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಲಿಖಿತ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಈಗ ದೇಶದ ಅತ್ಯುನ್ನತ ನ್ಯಾಯಾಲಯದ ಮೆಟ್ಟಿಲೇರಿದೆ.

ಸಾರ್ವಜನಿಕರ ವಿಶ್ವಾಸವನ್ನು ಉಳಿಸಲು ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ವಕೀಲ ಅನೂಪ್ ಅವಸ್ಥಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು, ಕೇವಲ ಮೌಖಿಕ ಆರೋಪಗಳ ಬದಲು ಅಧಿಕೃತ ಲಿಖಿತ ಟಿಪ್ಪಣಿಗಳನ್ನು ಸಲ್ಲಿಸುವಂತೆ ಸೂಚಿಸಿದ್ದು, ದಾಖಲೆಗಳ ಪರಿಶೀಲನೆಯ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಯುಪಿ ಸರ್ಕಾರದಿಂದ ಉನ್ನತ ಮಟ್ಟದ ‘SIT’ ರಚನೆ

ಮತ್ತೊಂದೆಡೆ, ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉತ್ತರ ಪ್ರದೇಶ ಸರ್ಕಾರ ತ್ವರಿತ ಕ್ರಮ ಕೈಗೊಂಡಿದೆ. ದೇಣಿಗೆ ಪೆಟ್ಟಿಗೆಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳಿಗೆ ಬ್ರೇಕ್ ಹಾಕಲು ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನಿಷ್ಪಕ್ಷಪಾತ ತನಿಖೆಗೆ ವಿನಂತಿಸಿತ್ತು. ಟ್ರಸ್ಟ್‌ನ ಕೋರಿಕೆಯ ಮೇರೆಗೆ ಸಿಎಂ ಯೋಗಿ ಅವರು ಮೂವರು ಉನ್ನತ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ತನಿಖೆ ಚುರುಕುಗೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !