ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿನಡೆಯಲಿರುವ ರಾಮ ಮಂದಿರದ ಶಂಕುಸ್ಥಾಪನೆಗೆ ತಮಗೆ ಇನ್ನೂ ಆಹ್ವಾನ ಬಂದಿಲ್ಲ, ಆಹ್ವಾನ ಬಂದ ನಂತರವೇ ಭಾಗವಹಿಸುವ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ ಹಲವಾರು ಪ್ರಮುಖ ವ್ಯಕ್ತಿಗಳು ಮತ್ತು ರಾಜಕೀಯ ನಾಯಕರನ್ನು ಈ ಮಹಾ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದೆ.
ಹೀಗಾಗಿ ಆಹ್ವಾನ ಬಂದಿದೆಯೇ ಎಂಬ ಪ್ರಶ್ನೆಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಇಂದಿನವರೆಗೂ ನನಗೆ ಆಹ್ವಾನ ಬಂದಿಲ್ಲ, ಆಹ್ವಾನ ಬಂದರೆ ಪರಿಶೀಲಿಸುತ್ತೇನೆ’ ಎಂದರು.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ‘ಸೂಕ್ತ ಸಮಯದಲ್ಲಿ’ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.