ಅಯೋಧ್ಯೆ ಶ್ರೀ ರಾಮಮಂದಿರಕ್ಕೆ ಒಲಿದು ಬಂತು ವಿಶ್ವದ ಅತ್ಯುನ್ನತ ಪ್ರಶಸ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿರುವ ರಾಮಮಂದಿರ ಯೋಜನೆಯು ಸುರಕ್ಷತೆ ನಿರ್ವಹಣೆಗೆ ಅಂತಾರಾಷ್ಟ್ರೀಯ ಮಟ್ಟದ ಮನ್ನಣೆ ಸಿಕ್ಕಿದೆ.

ವಿಶ್ವದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪ್ರತಿಷ್ಠಿತ ‘ಸ್ವರ್ಡ್ ಆಫ್ ಆನರ್’ ಪ್ರಶಸ್ತಿಯನ್ನು ಅಯೋಧ್ಯೆಯಲ್ಲಿರುವ ರಾಮಮಂದಿರ ಪಡೆದುಕೊಂಡಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ ಅವರು ಈ ಕುರಿತು ದೃಢಪಡಿಸಿದ್ದು, ಯೋಜನೆಯು ಸಾಧಿಸಿದ ಹೊಸ ಮೈಲಿಗಲ್ಲಿನ ಕುರಿತು ಸಂತೋಷ ವ್ಯಕ್ತಪಡಿಸಿದರು.

ಬ್ರಿಟಿಷ್ ಸೇಫ್ಟಿ ಕೌನ್ಸಿಲ್ ಪ್ರಕ್ರಿಯೆ, ಅಭ್ಯಾಸಗಳು ಮತ್ತು ಅಂತಿಮವಾಗಿ ಆನ್-ಸೈಟ್ ಚಟುವಟಿಕೆಯ ಮೌಲ್ಯಮಾಪನಗಳ ಆಡಿಟ್ ಮತ್ತು ಪಂಚತಾರಾ ಮೌಲ್ಯಮಾಪನವನ್ನು ನಡೆಸಿ, ‘ಸ್ವರ್ಡ್ ಆಫ್ ಆನರ್’ ಪ್ರಶಸ್ತಿ ಸ್ಪರ್ಧೆಯಲ್ಲಿ ಗೆದಿದ್ದೆ ಎಂದು ರಾಮಮಂದಿರ ನಿರ್ಮಾಣ ಸಮಿತಿ ಬಿಡುಗಡೆ ಮಾಡಿದ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಮತ್ತೊಂದೆಡೆ ರಾಮ ಮಂದಿರ ನಿರ್ಮಾಣದ ಹೊಣೆಗಾರಿಕೆಯನ್ನು ನಿರ್ವಹಿಸಿದ್ದ ಬಹುರಾಷ್ಟ್ರೀಯ ಕಂಪನಿಯಾದ ಲಾರ್ಸೆನ್ ಮತ್ತು ಟೂಬ್ರೊಗೆ ರಾಮ ಮಂದಿರ ನಿರ್ಮಾಣದಲ್ಲಿ ಕೈಗೊಂಡ ಸುರಕ್ಷತಾ ಕ್ರಮಗಳಿಗಾಗಿ ಭಾರತದ ರಾಷ್ಟ್ರೀಯ ಸುರಕ್ಷತಾ ಮಂಡಳಿಯಿಂದ ‘ಗೋಲ್ಡನ್ ಟ್ರೋಫಿ’ ನೀಡಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಕಟಣೆಯ ಪ್ರಕಾರ, ದೇವಾಲಯದ ಯೋಜನೆಯು ಸಾಂಸ್ಕೃತಿಕ ಪರಂಪರೆಯನ್ನು ಎಂಜಿನಿಯರಿಂಗ್ ಶ್ರೇಷ್ಠತೆಯೊಂದಿಗೆ ಸಂಯೋಜಿಸುತ್ತದೆ. ಲಾರ್ಸೆನ್ ಮತ್ತು ಟೂಬ್ರೊ ಕಂಪನಿಯ ನಿರ್ಮಾಣವು ಟಾಟಾ ಕನ್ಸಲ್ಟಿಂಗ್ ಇಂಜಿನಿಯರ್‌ಗಳೊಂದಿಗೆ ನಿಕಟವಾಗಿ ಸಂಯೋಜಿಸಲ್ಪಟ್ಟಿದ್ದು, ಗುಣಮಟ್ಟವನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿರ್ಮಾಣ ಸಮಿತಿಯು ಪರಿಣಾಮಕಾರಿ ಮೇಲ್ವಿಚಾರಣೆಯೊಂದಿಗೆ ಖಚಿತಪಡಿಸಿಕೊಂಡಿತ್ತು ಎಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!