ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕರು ಮಹಂತ್ ಸತ್ಯೇಂದ್ರ ದಾಸ್ ಅವರು ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದು, ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ.
85 ವರ್ಷದ ಮಹಂತ್ ಸತ್ಯೇಂದ್ರ ದಾಸ್ ಅವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಭಾನುವಾರ SGPGI ಗೆ ಸ್ಥಳಾಂತರಿಸಲಾಯಿತು. ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಅವರು ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿದ್ದು, ಪ್ರಸ್ತುತ ನ್ಯೂರಾಲಜಿ ವಾರ್ಡ್ HDU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು SGPGI ಆಸ್ಪತ್ರೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಧಾನ ಅರ್ಚಕರು ಮೆದುಳಿನ ಪಾರ್ಶ್ವವಾಯು, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಪ್ರಸ್ತುತ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಿತಿ ಗಂಭೀರವಾಗಿದ್ದರೂ ಅವರು ಮಾತುಗಳನ್ನು ಆಲಿಸುತ್ತಿದ್ದಾರೆ. ದೇಹದ ಇತರ ಅಂಗಗಳು ಸ್ಥಿರವಾಗಿವೆ. ನುರಿತ ವೈದ್ಯರ ತಂಡ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.
1992ರ ಡಿಸೆಂಬರ್ 6ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರಕ್ಕಾಗಿ ನಡೆದ ಹೋರಾಟಕ್ಕೂ (ಬಾಬರಿ ಮಸೀದಿ ಧ್ವಂಸ) ಮೊದಲು ಅವರು, ಪ್ರಧಾನ ಅರ್ಚಕರಾಗಿ ನೇಮಕವಾಗಿದ್ದರು. 20ನೇ ವಯಸ್ಸಿನಲ್ಲೇ ಸನ್ಯಾಸ ಜೀವನ ಸ್ವೀಕರಿಸಿದ್ದರು. ನಿರ್ವಾಣಿ ಅಖಾಡಕ್ಕೆ ಸೇರಿದ ಮಹಾಂತರು, ಮಂದಿರಕ್ಕಾಗಿ ನಡೆದ ಚಳವಳಿಯ ನಾಡಿಮಿಡಿತ ಬಲ್ಲ ಪ್ರಮುಖರಲ್ಲಿ ಒಬ್ಬರು.