Ayodhya | ಶ್ರೀರಾಮ ಮಂದಿರ ಪ್ರಾಣ ಪ್ರಪ್ರತಿಷ್ಠೆ: ಸಚಿನ್ ತೆಂಡೂಲ್ಕರ್ ಗೆ ಸಿಕ್ಕಿತು ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರಿಗೆ ಆಹ್ವಾನ ನೀಡಲಾಗಿದೆ.

ಉದ್ಯಮಿ ಮುಕೇಶ್ ಅಂಬಾನಿ, ಅಮಿತಾಭ್ ಬಚ್ಚನ್, ರತನ್ ಟಾಟಾ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಈಗಾಗಲೇ ಆಹ್ವಾನಿಸಲಾಗಿದ್ದು, ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ ಸೇರಿದಂತೆ ಸುಮಾರು 7000 ಗಣ್ಯ ವ್ಯಕ್ತಿಗಳ ಪಟ್ಟಿಯಲ್ಲಿದ್ದಾರೆ.

ಜನವರಿ 22 ರಂದು ಉತ್ತರ ಪ್ರದೇಶ ನಗರದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!