September 4, 2026
Friday, September 4, 2026
spot_img

ಅಯೋಧ್ಯೆ ಟ್ರಸ್ಟ್ ಹಗರಣ: ಜು.20ಕ್ಕೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ವರದಿ ಸಲ್ಲಿಕೆಗೆ SIT ಸಿದ್ಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ವಂಚನೆಯ ತನಿಖೆ ಅಂತಿಮ ಘಟ್ಟ ತಲುಪಿದೆ. ಜುಲೈ 20 ರಂದು ವಿಶೇಷ ತನಿಖಾ ತಂಡವು (SIT) ತನ್ನ ಮೊದಲ ಮಧ್ಯಂತರ ವರದಿಯನ್ನು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಿದೆ. ಈ ವರದಿಯ ಪರಿಣಾಮವಾಗಿ ರಾಮ ಮಂದಿರದ ಆಡಳಿತ ಮತ್ತು ದೇಣಿಗೆ ನಿರ್ವಹಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಾಗುವ ಮುನ್ಸೂಚನೆ ಸಿಕ್ಕಿದೆ.

ತನಿಖಾ ಅವಧಿ ವಿಸ್ತರಣೆಗೆ ಮನವಿ

ಟ್ರಸ್ಟ್ ನೀಡಿದ ದೂರಿನ ಮೇರೆಗೆ ಜೂನ್ 13 ರಂದು ಉತ್ತರ ಪ್ರದೇಶ ಸರ್ಕಾರವು ಮೂವರು ಸದಸ್ಯರ ಎಸ್‌ಐಟಿ ತಂಡವನ್ನು ರಚಿಸಿತ್ತು. ಆರಂಭದಲ್ಲಿ 15 ದಿನಗಳ ಗಡುವು ನೀಡಲಾಗಿದ್ದರೂ, ವಹಿವಾಟುಗಳ ವ್ಯಾಪ್ತಿ ದೊಡ್ಡದಾಗಿದ್ದರಿಂದ ಜುಲೈ 1 ರಂದು ಅವಧಿಯನ್ನು ವಿಸ್ತರಿಸಲಾಗಿತ್ತು. ಈಗ ಆಳವಾದ ಆರ್ಥಿಕ ಪರಿಶೀಲನೆಗಾಗಿ ಅಂತಿಮ ವರದಿ ಸಿದ್ಧಪಡಿಸಲು ಎಸ್‌ಐಟಿ ಸರ್ಕಾರಕ್ಕೆ ಮತ್ತಷ್ಟು ಕಾಲಾವಕಾಶ ಕೋರಿದೆ. ಜುಲೈ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !