ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಅನುಷ್ಕಾ ಶರ್ಮಾ ಮತ್ತು ಪತಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಯೋಧ್ಯೆಯ ಐತಿಹಾಸಿಕ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಲ್ಲಿ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಪತ್ನಿ ಅನುಷ್ಕಾ ಶರ್ಮಾ ಜೊತೆ ಇಂದು ಅಯೋಧ್ಯಾ ಧಾಮ್ಗೆ ಆಗಮಿಸಿದ ಕೊಹ್ಲಿ ಮೊದಲು ರಾಮ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಆ ಬಳಿಕ ಅಯೋಧ್ಯೆಯಲ್ಲಿರುವ ಹನುಮಾನಗರ್ಹಿಗೂ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ.
ಹಲವಾರು ಚಿತ್ರಗಳು ಮತ್ತು ವೀಡಿಯೊಗಳಲ್ಲಿ ಸೆರೆಹಿಡಿಯಲಾದ ಈ ದಂಪತಿಗಳ ಭೇಟಿ ಸಾಮಾಜಿಕ ಮಾಧ್ಯಮಗಳಲ್ಲಿ ನೋಡುಗರ ಗಮನ ಸೆಳೆದಿದೆ.