ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮ ಜನ್ಮಭೂಮಿ ಅಯೋಧ್ಯೆಯ ಮೆರುಗು ಇನ್ನಷ್ಟು ಹೆಚ್ಚಾಗುತ್ತಿದ್ದು, ಇದೀಗ ರಾಮನಗರಿಯಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಾಣವಾಗಲಿದೆ.
ಟಾಟಾ ಸನ್ಸ್ ಸಂಸ್ಥೆಯು 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ಅನ್ನು ಸ್ಥಾಪಿಸಲು ಮುಂದಾಗಿದ್ದು, ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಟಾಟಾ ಗ್ರೂಪ್‌ನ ಮಾತೃ ಸಂಸ್ಥೆಯಾಗಿರುವ ಟಾಟಾ ಸನ್ಸ್‌ನ ಈ ಯೋಜನೆಗೆ ಹಸಿರು ನಿಶಾನೆ ತೋರಿದೆ.
ಟಾಟಾ ಸನ್ಸ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ಅಡಿಯಲ್ಲಿ 650 ಕೋಟಿ ರೂಪಾಯಿ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಮೂಲಕ ಯೋಜನೆಯನ್ನು ಪ್ರಸ್ತಾಪಿಸಿದೆ. ಈ ಅತ್ಯಾಧುನಿಕ ವಸ್ತುಸಂಗ್ರಹಾಲಯವು ಅಂತಾರಾಷ್ಟ್ರೀಯ ಗುಣಮಟ್ಟವನ್ನು ಪೂರೈಸುತ್ತದೆ. ಭಾರತದ ಪ್ರಸಿದ್ಧ ದೇವಾಲಯಗಳ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಪ್ರದರ್ಶಿಸುತ್ತದೆ ಎಂದು ಸಚಿವ ಜೈವಿರ್ ಸಿಂಗ್ ಹೇಳಿದ್ದಾರೆ.